ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬಲಿ ಸಂಖ್ಯೆ 14ಕ್ಕೇರಿಕೆ!

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ನಲ್ಲಿ ಏರ್ ಇಂಡಿಯಾ ವಿಮಾನ ಅವಘಡ ಸಂಭವಿಸಿದೆ. ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಸ್ಕಿಡ್ ಆಗಿರುವ ಬಗ್ಗೆ ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಪೈಲೆಟ್ ಸೇರಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು 170 ಮಂದಿಯನ್ನು ರಕ್ಷಿಸಲಾಗಿದೆ.
ಘಟನಾಸ್ಥಳಕ್ಕೆ ಎನ್ ಡಿ ಆರ್ ಎಫ್ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ದುಬೈನಿಂದ ಕೇರಳದ ಕೋಝಿಕೊಡ್ ಗೆ ಹೊರಟಿದ್ದ ಏರ್ ಇಂಡಿಯಾದ IX1344 ವಿಮಾನ ಇಂದು ಸಂಜೆ 7.45ರ ವೇಳೆಗೆ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಏರ್ ಇಂಡಿಯಾದ IX1344 ವಿಮಾನದಲ್ಲಿ ಇಬ್ಬರು ಪೈಲೆಟ್ ಆರು ಮಂದಿ ಸಿಬ್ಬಂದಿ ಸೇರಿದಂತೆ ಪ್ರಯಾಣಿಕರಿದ್ದರು.

Leave a Reply

Your email address will not be published. Required fields are marked *