ಕಬಿನಿ ನದಿಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ

ಮೈಸೂರು: ಕಬಿನಿ ಜಲಾಶಯದ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 10000 ಕ್ಯೂಸೆಕ್ ಇದ್ದು, ಜಲಾನಯನ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಪ್ರಯುಕ್ತ, ಕಬಿನಿ ಜಲಾಶಯದಿಂದ 2000ಕ್ಯೂಸೆಕ್ ನಿಂದ 5000 ಕ್ಯೂಸೆಕ್ ನೀರನ್ನು ಹೊರಬಿಡುವ ಸಾಧ್ಯತೆಯಿದ್ದು ಯಾವುದೇ ಕ್ಷಣದಲ್ಲಾದರೂ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ.
ಆದ್ದರಿಂದ ಸಾರ್ವಜನಿಕರು ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಸುಜಾತಾ ಎನ್. ಕೋರಿದ್ದಾರೆ.

Leave a Reply

Your email address will not be published. Required fields are marked *