ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗೆ ಕೊರೊನಾ ಪಾಸಿಟಿವ್!

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್‍ಗೆ ಕೊರೊನಾ ಪಾಸಿಟಿವ್ ಆಗಿದೆ. ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿ ಪ್ರದೇಶದಲ್ಲಿ ಜಮೀರ್ ಕಳೆದ ವಾರದಿಂದ ಸಂಚಾರ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ಟ್ವೀಟ್ ಮೂಲಕ ಜಮೀರ್ ಅಹ್ಮದ್ ಖಾನ್ ತಮಗೆ ಸೋಂಕು ತಗಲಿದ್ದನ್ನು ದೃಢಪಡಿಸಿದ್ದಾರೆ. ವಿಚಾರವನ್ನು ತಿಳಿಸಿದ್ದಾರೆ. `ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ’ ಎಂದು ಜಮೀರ್ ಅಹ್ಮದ್ ಖಾನ್ ಟ್ವೀಟ್ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್‍ಗೆ ಕೋವಿಡ್ ಸೋಂಕು ತಗುಲಿರುವುದರಿಂದ ಅವರ ಜೊತೆ ಸಂಪರ್ಕದಲ್ಲಿದ್ದವರು ಆತಂಕಗೊಂಡಿದ್ದಾರೆ.