ಕಾಶ್ಮೀರ: ಉಗ್ರರಿಂದ ಯೋಧನ ಅಪಹರಣ, ವಾಹನ ಸುಟ್ಟ ಸ್ಥಿತಿಯಲ್ಲಿ ಪತ್ತೆ!

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಯೋಧ ನಾಪತ್ತೆಯಾಗಿದ್ದು ಅವರ ವಾಹನ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಗ್ರರು ಅವರನ್ನು ಅಪಹರಿಸಿರುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಾಹನವು ಮುಜಾಫರ್ ಮನ್ಸೂರ್ ಹೆಸರಿನಲ್ಲಿ ದಾಖಲಾಗಿದೆ. ಅವರು ಶಾಪಿಯನ್‍ನಲ್ಲಿ ವಾಸಿಸುವವರಾಗಿದ್ದಾರೆ. ಗುಲ್ಗಾಂನ ರಾಂಭಾಮಾ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಮನ್ಸೂರ್ ಟೆರಟೋರಿಯಲ್ ಆರ್ಮಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಉಗ್ರರು ಅಪಹರಿಸಿರಬಹುದು ಎಂದು ಅಂದಾಜಿಸಲಾಗಿದೆ. ಶೀಘ್ರವೇ ಅವರನ್ನು ಹುಡುಕಿ ಸುರಕ್ಷಿತವಾಗಿ ಕರೆತರಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.