ಕೆರೆಕಾಡು: ಆವರಣವಿಲ್ಲದ ಬಾವಿಗೆ ಕಾಲು ಜಾರಿ ಬಿದ್ದು ಸಾವು

ಮೂಲ್ಕಿ: ಪಡುಪಣಂಬೂರು ಗ್ರಾಮಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ಕೆರೆಕಾಡು ಗ್ರಾಮದ ವಿಶ್ವನಾಥ್ ಬಿ ದೇವಾಡಿಗ (36) ಯಾನೆ ಇಚು ಇವರು ತಮ್ಮ ಮನೆಯ ಹತ್ತಿರ ಇರುವ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ರಾತ್ರಿ ಸ್ಥಳೀಯ ಭಜನ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆಯ ಕಾರ್ಯಕ್ರಮವನ್ನು ಮುಗಿಸಿಕೊಂಡು ಮನೆ ಹತ್ತಿರ ನಡೆದುಕೊಂಡು ಬರುವಾಗ ಈ ಘಟನೆ ನಡೆದಿದೆ ಎಂದು ಸಂಶಯಿಸಲಾಗಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *