ಕ್ಯಾನ್ಸರ್ ನಿಂದ ಬಳಲುತ್ತಿರುವ ಗ್ರಾ.ಪಂ. ಸದಸ್ಯನಿಗೆ ಸಾಂತ್ವನ

ಹಾಸನ: ಕಡೂರು ತಾಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಟಿ.ಬಿ. ಕಾವಲು ಮಂಜನಾಥ್ ನಾಯ್ಕ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಈಗ ಅವರು ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ತಮ್ಮ ಮಾವನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಂಗಳವಾರ ವಿಧಾನ ಪರಿಷತ್ ಮಾಜಿ ಶಾಸಕಿ ಎ.ವಿ.ಗಾಯತ್ರಿ ಶಾಂತೇಗೌಡ ನೇತೃತ್ವದಲ್ಲಿ ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ಪುಟ್ಟಸ್ವಾಮಿ, ನಿಡಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹೇಮಾವತಿ, ಪಕ್ಷದ ಮುಖಂಡರಾದ ಕುಮಾರ್ (ಗಾಂಧಿ), ಅಣ್ಣಪ್ಪನಾಯ್ಕ್ ಸಾಂತ್ವನದೊಂದಿಗೆ ಚಿಕಿತ್ಸೆಗೆ ನೆರವಿನ ಹಸ್ತ ನೀಡಿ ಶೀಘ್ರ ಗುಣಮುಖರಾಗುವಂತೆ ಶುಭ ಕೋರಿದರು.

Leave a Reply

Your email address will not be published. Required fields are marked *