ಗಾಯಕ ಎಸ್ಪಿ ಪತ್ನಿಗೂ ಕೊರೊನಾ ಪಾಸಿಟಿವ್

ಬೆಂಗಳೂರು: ಬಹುಭಾಷಾ ಗಾಯಕ ಎಸ್ಪಿ ಬಾಲಸುಬ್ರಹ್ಮಣಂ ಅವರಿಗೆ ಆ.5ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ನಿನ್ನೆಯಿಂದ ಗಂಭೀರ ಆಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಪಿ ಅವರಿಗೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕುಟುಂಬದ ಇತರರಿಗೂ ಪರೀಕ್ಷೆ ಮಾಡಿಸಲಾಗಿತ್ತು. ಈ ವೇಳೆ ಪತ್ನಿ ಸಾವಿತ್ರಿ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ. ಈ ಕುರಿತು ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಅವರು ತಮಿಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.