ಚಾರ್ಮಾಡಿ ಘಾಟ್ ನಲ್ಲಿ ಕಾರ್ ನಿಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ!

ಮಂಗಳೂರು: ಚಾರ್ಮಾಡಿ ಘಾಟ್ ನಲ್ಲಿ ಕಾರ್ ನಿಲ್ಲಿಸಿದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಇಂದು ಸಂಜೆ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಆರ್.ನಾಗರಾಜ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ವಿಷದ ಬಾಟಲಿ ಮತ್ತು ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ಪತ್ನಿಯನ್ನು ಕಳೆದುಕೊಂಡ ನೋವಿನಲ್ಲಿ ಕೃತ್ಯವೆಸಗಿದ್ದಾಗಿ ಬರೆಯಲಾಗಿದೆ.
`ನಾನು ಆರ್. ನಾಗರಾಜ್ ಆಗಿದ್ದು ಪತ್ನಿ ಲಕ್ಷ್ಮಿಯನ್ನು ಕಳೆದುಕೊಂಡ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಲಕ್ಷ್ಮಿಯಿದ್ದಲ್ಲಿಗೆ ತೆರಳುತ್ತಿದ್ದೇನೆ’ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಡೆತ್ ನೋಟ್ ನಲ್ಲಿ ಕೆಲವೊಂದು ಸ್ನೇಹಿತರ ಮೊಬೈಲ್ ನಂಬರ್ ಗಳನ್ನೂ ಬರೆಯಲಾಗಿದ್ದು ಬೈಕ್ ಮಾರಿದ ಹಣವನ್ನೂ ಪಡೆದುಕೊಳ್ಳಿ ಎಂದು ಹೇಳಲಾಗಿದೆ.

