ಚಾರ್ಮಾಡಿ ಘಾಟ್ ರಸ್ತೆ ಬಂದ್!

ಮಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಲ್ಲಿ ನಿರಂತರ ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಇಂದು ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಬೃಹತ್ ಗಾತ್ರದ ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ. ಅಲೇಖಾನ್ ಬಳಿ ರಸ್ತೆ ಬಿರುಕು ಬಿಟ್ಟಿದ್ದು ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ.
ಮೊನ್ನೆ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಹೆದ್ದಾರಿ ಬಂದ್ ಆಗಿತ್ತು. ಇಂದು ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಬೃಹತ್ ಗಾತ್ರದ ಬಂಡೆಗಳು, ಮಣ್ಣು ರಸ್ತೆ ಮೇಲೆ ಬಿದ್ದಿದ್ದು ರಸ್ತೆಯಲ್ಲೂ ಬಿರುಕು ಕಾಣಿಸಿಕೊಂಡಿದೆ. ಕೊಟ್ಟಿಗೆಹಾರದಲ್ಲಿ ವಾಹನಗಳನ್ನು ತಡೆದು ನಿಲ್ಲಿಸಲಾಗಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರವಾಸಿಗರು ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸದಂತೆ ಪೊಲೀಸರು ಸೂಚನೆ ಹೊರಡಿಸಿದ್ದಾರೆ.