ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ!

ಚಿಕ್ಕಬಳ್ಳಾಪುರ: ಶಿಕ್ಷಕರೊಬ್ಬರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಬೊಮ್ಮಸಂದ್ರದ ನಿವಾಸಿ ಶಿಕ್ಷಕ ಶ್ರೀನಾಥ ರೆಡ್ಡಿ(34) ಅವರು ಜಕ್ಕಳಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಜಲಾಶಯದಲ್ಲಿ ಮೃತದೇಹ ಪತ್ತೆಯಾಗಿದೆ. ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಶ್ರೀನಾಥ ರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಸಂಜೆ ಮನೆಗೂ ಬಂದಿರಲಿಲ್ಲ. ಕುಟುಂಬದವರು ಅವರ ಹುಡುಕಾಟ ನಡೆಸಿದ್ದರು. ಆಗ ಶ್ರೀನಾಥ್ ರೆಡ್ಡಿ ಅವರ ಬೈಕ್ ಹಾಗೂ ಮೊಬೈಲ್ ಜಕ್ಕಲಮಡಗು ಜಲಾಶಯದ ದಂಡೆ ಮೇಲೆ ಪತ್ತೆಯಾಗಿದ್ದವು. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮಂಗಳವಾರ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.