`ಡಿಕೆಶಿ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ’

ಚಿಕ್ಕಮಗಳೂರು: ಭ್ರಷ್ಟಾಚಾರದಲ್ಲಿ ಜೈಲು ಸೇರಿದ್ದ ಡಿಕೆಶಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಕೇಳುವುದಕ್ಕೂ ಇದಕ್ಕೂ ಯಾವುದೇ ವ್ಯತ್ಯಾಸವಿಲ್ಲ' ಎಂದು ಸಚಿವ ಸಿಟಿ ರವಿ ಆವರು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಸರಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಡಿರುವ ಆರೋಪಗಳಿಗೆ ಉತ್ತರಿಸಿದ ರವಿ,ಡಿಕೆಶಿ ಏನೂ ಪ್ರಾಮಾಣಿಕರಲ್ಲ’ ಎಂದು ಲೇವಡಿ ಮಾಡಿದ್ದಾರೆ. `ಭ್ರಷ್ಟಾಚಾರ ನಡೆದಿದೆ ಎನ್ನುವುದಕ್ಕೆ ಸಾಕ್ಷಿಯಿದ್ದರೆ ಸಿದ್ದರಾಮಯ್ಯ ದೂರು ಕೊಡಲಿ. ಲೋಕಾಯುಕ್ತಕ್ಕೆ ದಾಖಲೆಗಳನ್ನು ಸಲ್ಲಿಸಲಿ. ಅದನ್ನು ಬಿಟ್ಟು ಏನು ಬೇಕಾದರೂ ಮಾತಾಡಬಹುದು ಎಂದು ಸಿದ್ದರಾಮಯ್ಯ ಯೋಚನೆ ಮಾಡುವುದು ಸರಿಯಲ್ಲ’ ಎಂದು ಸಿಟಿ ರವಿ ಹೇಳಿದರು.

Leave a Reply

Your email address will not be published. Required fields are marked *