`ನಾನು ಆರೋಗ್ಯವಾಗಿದ್ದೇನೆ, ನೀವೂ ಮಾಸ್ಕ್ ಧರಿಸಿ ಅಂತರ ಕಾಪಾಡಿ’ ರಾಜ್ಯದ ಜನತೆಗೆ ಯಡಿಯೂರಪ್ಪ ವಿಡಿಯೋ ಸಂದೇಶ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅಲ್ಲಿಂದಲೇ ರಾಜ್ಯದ ಜನತೆಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಡಿ. ಆದಷ್ಟು ಬೇಗ ನಾನು ಗುಣಮುಖನಾಗಿ ಬರುತ್ತೇನೆ. ನೀವೂ ಕೂಡಾ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿ' ಎಂದು ಹೇಳಿದ್ದಾರೆ. ನಾನು ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ. ಇಲ್ಲಿಂದಲೇ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುತ್ತಿದ್ದೇನೆ. ಭಾನುವಾರ ರಾತ್ರಿ ನಾನು ಕೊರೊನಾ ಪಾಸಿಟಿವ್ ಎಂದು ತಿಳಿಯಿತು. ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ರಾತ್ರಿಯಿಂದ ಪರೀಕ್ಷೆ ಮಾಡಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ, ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಮುಂತಾದವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ’ ಎಂದು ಯಡಿಯೂರಪ್ಪ ಹೇಳಿದ್ದಾರೆ.

Leave a Reply

Your email address will not be published. Required fields are marked *