ಪುತ್ತೂರು: ಭೀಕರ ಅಪಘಾತಕ್ಕೆ ಇಬ್ಬರು ಬಲಿ!

ಮಂಗಳೂರು: ಪುತ್ತೂರು ಸಮೀಪದ ನರಿಮೊಗರು ಶಾಲೆ ಬಳಿ ಬೈಕ್-ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಮಿಥುನ್ ಮತ್ತು ಭವಿತ್ ಎಂದು ಹೆಸರಿಸಲಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡು ರಸ್ತೆಯ ಮಧ್ಯೆ ಬಿದ್ದಿದ್ದ ಸವಾರರಿಬ್ಬರನ್ನು ಅದೇ ರಸ್ತೆಯಾಗಿ ಹೋಗುತ್ತಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಅವರು ತನ್ನ ಕಾರಿನಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಂಭೀರ ಇಬ್ಬರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *