ಫೇಸ್ಬುಕ್ ಪೋಸ್ಟ್: ಆರೋಪಿ ನವೀನ್ ಗೆ ನ್ಯಾ. ಸೆರೆ

ಬೆಂಗಳೂರು: ಇಸ್ಲಾಂ ಧರ್ಮದ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ನನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿ ನವೀನ್ ತಾನೇ ಕೃತ್ಯವೆಸಗಿದ್ದು ಬಯಲಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಸ್ಥಳ ಮಹಜರು ನಡೆಸಿ ಇಂದು ಪೊಲೀಸರು ವೀಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಆರೋಪಿ ನವೀನ್ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗಗನಾಗಿದ್ದು ಪೊಲೀಸರು ತೀವ್ರ ವಿಚಾರಣೆ ನಡೆಸಿದ ವೇಳೆ ತಾನು ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಕೂಡ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

Leave a Reply

Your email address will not be published. Required fields are marked *