ಬಲೂಚಿಸ್ತಾನ: ಬಾಂಬ್ ಸ್ಫೋಟಕ್ಕೆ ಐವರು ಬಲಿ

ಚಮನ್: ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಗಡಿ ಭಾಗದ ಪಟ್ಟಣವೊಂದರಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಅಫ್ಘಾನಿಸ್ತಾನ ಗಡಿಭಾಗದ ಚಮನ್ ಪಟ್ಟಣದ ಹಾಜಿ ನಿದಾ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 5 ಮಂದಿ ಮೃತಪಟ್ಟು 10 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ಹೊಣೆಯನ್ನು ಯಾವ ಉಗ್ರ ಸಂಘಟನೆಯೂ ಹೊತ್ತುಕೊಂಡಿಲ್ಲ. ಅಫ್ಘನ್ ಮೂಲದ ಉಗ್ರ ಸಂಘಟನೆಗಳು, ಪ್ರತ್ಯೇಕತಾವಾದಿಗಳು ಸೇರಿದಂತೆ ಹಲವು ಉಗ್ರ ಸಂಘಟನೆಗಳು ಈ ಪ್ರಾಂತ್ಯದಲ್ಲಿ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿವೆ. ಪಾಕ್ ಮೂಲದ ಉಗ್ರ ಸಂಘಟನೆಗಳಿಗೆ ಸೇರಿದ 6500ಕ್ಕೂ ಹೆಚ್ಚು ಉಗ್ರರು ಅಫ್ಘಾನ್‍ನಲ್ಲಿದ್ದಾರೆ ಅಂತಾ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತಿಳಿಸಿದೆ.

Leave a Reply

Your email address will not be published. Required fields are marked *