`ಬಿಗ್ ಬಾಸ್’ ಪ್ರಥಮ್ ಗೆ ಕೊಲೆ ಬೆದರಿಕೆ!

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಆರೋಪಿಗಳ ಸಂಬಂಧಿ ಮಹಿಳೆಯೊಬ್ಬರು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆಯಲ್ಲಿನನಗೆ 4 ತಿಂಗಳ ಮಗು ಹಾಗೂ ಏಳು ತಿಂಗಳ ಮಗು ಇದೆ’ ಎಂದು ಹೇಳಿದ್ದರು. ಇದನ್ನು ವ್ಯಂಗ್ಯದ ಧಾಟಿಯಲ್ಲಿ ಬರೆದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿದ್ದ ಬಿಗ್ ಬಾಸ್ ಪ್ರಥಮ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಕೊಲೆ ಬೆದರಿಕೆ ಒಡ್ಡಲಾಗಿದೆ. ಫ್ರಥಮ್ ವಿರುದ್ಧ ಹಲಸೂರು ಗೇಟ್ ಪೋಲೀಸ್ ಠಾಣೆಯಲ್ಲಿ ಎಸ್‍ಡಿಪಿಐ ಸದಸ್ಯ ಅಬ್ದುಲ್ ಫಾರೂಕ್ ಎಂಬವರು ದೂರು ನೀಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಐಪಿಸಿ ಸೆಕ್ಷನ್ 295 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
`ಇಂತಹ ಮುಗ್ಧ ಮುಸ್ಲಿಮ್‍ಗಳು ಅನ್ ಎಜ್ಯುಕೇಟೆಡ್ ಆಗಿರಬೇಕು. ಇಲ್ಲ ಅಂದ್ರೆ ಅಲ್ಲಾ ಪವಾಡ ಮಾಡಿರಬೇಕು. 4 ತಿಂಗಳು ವ್ಯತ್ಯಾಸ ಲೇ ಹೆಂಗೆ ಎರಡು ಮಕ್ಕಳು ಹುಟ್ಟೋಕೆ ಸಾಧ್ಯ? ಸೈನ್ಸ್‍ಗೆ ಅಸಾಧ್ಯವಾದದ್ದು ಅಲ್ಲಾಗೆ ಮಾತ್ರ ಸಾಧ್ಯ. ಖುದಾಫೀಸ್. ಸಬ್ ಅಲ್ಲಾಕಾ ಮೆಹರುಬಾನಿ!’ ಎಂದು ಫೇಸ್ಬುಕ್ ನಲ್ಲಿ ಪ್ರಥಮ್ ಪೋಸ್ಟ್ ಹಾಕಿದ್ದರು. ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದಂತೆ ಪೋಸ್ಟ್ ಅನ್ನು ಡಿಲೀಟ್ ಮಾಡಿದ ಪ್ರಥಮ್, ಮುಸ್ಲಿಂ ಗೆಳೆಯರು ಸಲಹೆ ನೀಡಿದ್ದರಿಂದ ಪೋಸ್ಟ್ ಡಿಲೀಟ್ ಮಾಡಿದ್ದೇನೆ. ಆದರೆ ಕೆಲವರು ನನಗೆ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಕಚೇರಿ ಸಂಖ್ಯೆಗೂ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಬೆದರಿಕೆ ಸಂದೇಶಗಳ ವಿರುದ್ಧ ತಾವೂ ಸಹ ಪ್ರಕರಣ ದಾಖಲಿಸುವುದಾಗಿ ಪ್ರಥಮ್ ಹೇಳಿದ್ದಾರೆ.

Leave a Reply

Your email address will not be published. Required fields are marked *