ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಪೋರೇಟರ್ ಶ್ವೇತಾ ನೇಮಕ

ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ ಎರಡನೇ ವಾಡ್9ನ ಸದಸ್ಯೆ ಶ್ವೇತಾ ಎಸ್. ಪೂಜಾರಿ ಅವರು ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಯುವ ಮೋರ್ಚಾದ ರಾಜ್ಯ ಘಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಪ್ರತಿನಿಧಿಯಾಗಿದ್ದಾರೆ. ಯುವಮೋರ್ಚಾದ ರಾಜ್ಯ ಅಧ್ಯಕ್ಷ ಡಾ. ಸಂದೀಪ್ ಅವರು ಈ ನೇಮಕದ ಆದೇಶ ಪ್ರಕಟಿಸಿದ್ದಾರೆ.