ಬಿಹಾರ ಚುನಾವಣೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಪಾಟ್ನಾ: ಕೋವಿಡ್ 19 ಕಾರಣದಿಂದಾಗಿ ವಿಧಾನಸಭೆ ಚುನಾವಣೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ನಿನ್ನೆ ಸುಪ್ರೀಂಕೋರ್ಟ್ ಹೇಳಿದೆ. ಬಿಹಾರ ವಿಧಾನಸಭೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದು ಈ ಮೂಲಕ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಬಿಹಾರ ರಾಜ್ಯ ಕೋವಿಡ್‌ನಿಂದ ಮುಕ್ತವಾಗುವ ತನಕ ವಿಧಾನಸಭೆ ಚುನಾವಣೆ ಮುಂದೂಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ನಿನ್ನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಚುನಾವಣಾ ಆಯೋಗ ಎಲ್ಲವನ್ನೂ ನೋಡಿಕೊಳ್ಳಲಿದೆ ಎಂದು ಹೇಳಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿಲ್ಲ ಅಷ್ಟರಲ್ಲಿಯೆ ಸಲ್ಲಿಸುವ ಈ ಅರ್ಜಿ ಮಾನ್ಯ ಮಾಡುವುದಿಲ್ಲ ಎಂದು ಹೇಳಿತು. ಕೋವಿಡ್ ಕಾರಣಕ್ಕಾಗಿ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕು ಎಂಬ ವಾದ ಮಾನ್ಯ ಮಾಡಲು ಸಾಧ್ಯವಿಲ್ಲ. ಚುನಾವಣಾ ಆಯೋಗದ ಅಧಿಕಾರದ ಬಗ್ಗೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. “ಏನು ಮಾಡಬೇಕು ಎಂದು ನ್ಯಾಯಾಲಯ ಚುನಾವಣಾ ಆಯೋಗಕ್ಕೆ ಹೇಳಲು ಬರುವುದಿಲ್ಲ. ಎಲ್ಲವನ್ನೂ ಚುನಾವಣಾ ಆಯೋಗವೇ ತೀರ್ಮಾನಿಸಲಿದೆ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಬಿಹಾರದಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ 1,28,850. 662 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ರಾಜ್ಯ ಸರ್ಕಾರದ ಅವಧಿ ಅಕ್ಟೋಬರ್‌ನಲ್ಲಿ ಮುಗಿಯಲಿದೆ. 243 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯಬೇಕಿದೆ.

Leave a Reply

Your email address will not be published. Required fields are marked *