ಬೆಂಗಳೂರು ಗಲಭೆ: ಪ್ರಮುಖ ಆರೋಪಿಗಳ ಸೆರೆ

ಬೆಂಗಳೂರು: ಇತ್ತೀಚೆಗೆ ನಗರದ ಡಿ ಜೆ ಹಳ್ಳಿ ಹಾಗೂ ಕೆ ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಪಾಲ್ಗೊಂಡಿದ್ದ ನಾಲ್ವರು ಪ್ರಮುಖ ಆರೋಪಿಗಳನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ರೂವಾರಿ ವಾಜಿದ್ ಎಂಬಾತನ ಸಹಚರರಾದ ತೌಸಿಫ್, ಫಾಜಿಲ್, ಅಫ್ಜಲ್ ಹಾಗೂ ಪಾಷಾ ಎಂಬವರನ್ನು ಬಂಧಿಸಲಾಗಿದೆ.
ವಾಜಿದ್ ವಿಚಾರಣೆ ವೇಳೆ ನೀಡಿದ ಸುಳಿವಿನ ಮೇರೆಗೆ ರಹಸ್ಯ ಸ್ಥಳವೊಂದರಲ್ಲಿ ಅಡಗಿ ಕುಳಿತಿದ್ದ ನಾಲ್ವರನ್ನು ಸಿಸಿಬಿಯ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಇನ್ನೂ ಆರು ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು ಅವರು ಪರಾರಿಯಾಗಿದ್ದಾರೆ.