`ಭಜರಂಗದಳ-ವಿಹೆಚ್ ಪಿ ಮುಖಂಡರ ಎಲ್ಲಾ ಪ್ರಕರಣಗಳನ್ನು ಕೈಬಿಡಲ್ಲ’

ಹಾವೇರಿ: ಕೆಲವು ದಿನಗಳ ಹಿಂದೆ ಮಂಗಳೂರು ಭೇಟಿ ಸಂದರ್ಭ ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ವಿಶ್ವ ಹಿಂದೂ ಪರಿಷತ್ ನಾಯಕರ ಜೊತೆ ನಡೆಸಿದ ಮಾತುಕತೆ ವಿವಾದಕ್ಕೆ ಕಾರಣವಾಗಿದ್ದು ಈ ಕುರಿತು ಸ್ಪಷ್ಟನೆ ನೀಡಿರುವ ಬೊಮ್ಮಾಯಿ ಅವರು,ನಾನು ಭಜರಂಗದಳ ಮೇಲಿನ ಎಲ್ಲಾ ಪ್ರಕರಣಗಳನ್ನು ಕೈಬಿಡುವುದಾಗಿ ಹೇಳಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸಿಕೊಡುವುದು ನನ್ನ ಕರ್ತವ್ಯ. ಹೀಗಾಗಿ ಮನವಿ ಸಲ್ಲಿಸಿದ ಮಾತ್ರಕ್ಕೆ ಭಜರಂಗದಳ, ವಿಹೆಚ್ ಪಿ ಮೇಲಿನ ಎಲ್ಲಾ ಪ್ರಕರಣಗಳನ್ನು ಕೈಬಿಡುವುದಿಲ್ಲ’ ಎಂದಿದ್ದಾರೆ.
ಸಂಘಟನೆಗಳ ಕಾರ್ಯಕರ್ತರಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮುಖಂಡರು ಮನವಿ ಪತ್ರ ಸಲ್ಲಿಸಿದ್ದಾರೆ. ಈ ಹಿಂದಿನ ಸರ್ಕಾರವೂ ಕೂಡಾ ಕೆಲವು ಸಂಘಟನೆಗಳ ಪ್ರಕರಣ ಕೈ ಬಿಟ್ಟಿದೆ. ಕಾನೂನು ಏನಿದೆಯೋ ಅದನ್ನು ಪಾಲಿಸುತ್ತೇನೆ' ಎಂದು ಬೊಮ್ಮಾಯಿ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರು ಭೇಟಿಯ ಸಂದರ್ಭ ಸಂಘಪರಿವಾರದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ್ದ ಅವರು,ನಿಮ್ಮ ಮೇಲೆ ಯಾವುದೇ ಕ್ರಿಮಿನಲ್ ಕೇಸ್ ಹಾಕಿದ್ರೂ ತೆಗೆದು ಹಾಕುತ್ತೇವೆ’ ಎಂದಿದ್ದ ವಿಡಿಯೋ ವೈರಲ್ ಆಗಿತ್ತು.

Leave a Reply

Your email address will not be published. Required fields are marked *