ಮಂಗಳೂರು ಅಲ್ಪಸಂಖ್ಯಾತ ಭವನಕ್ಕೆ ಕಲ್ಲುತೂರಾಟ!

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಮೌಲಾನಾ ಅಝಾದ್ ಅಲ್ಪಸಂಖ್ಯಾತರ ಭವನಕ್ಕೆ ಕಲ್ಲು ತೂರಾಟ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಿನ್ನೆ ತಡರಾತ್ರಿ ನಾಲ್ಕೈದು ಜನರ ತಂಡ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನಾಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಭೇಟಿ ನೀಡಿಮ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಸ್ಥಳದಲ್ಲಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *