ಮನಪಾ ನೂತನ ಆಯುಕ್ತರಾಗಿ ಅಕ್ಷಯ್ ಶ್ರೀಧರ್ ನೇಮಕ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ 2017ರ ಬ್ಯಾಚ್ ನ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಸದ್ಯ ಬೀದರ್ ಉಪವಿಭಾಗದ ಸಹಾಯಕ ಆಯುಕ್ತರಾಗಿರುವ ಅಕ್ಷಯ್ ಶ್ರೀಧರ್ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ಮಂಗಳೂರು ಮನಪಾ ಆಯುಕ್ತರಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಇತ್ತೀಚೆಗೆ ವರ್ಗಾವಣೆಗೊಂಡಿದ್ದರು.