ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ

ಹೊಸದಿಲ್ಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸ್ಸಾಮಿ ದಿಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಉಪಸ್ಥಿತರಿದ್ದರು. ಅಣ್ಣಾಮಲೈ ಅವರು ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್ಪಿ ಆಗಿ ಸೇವೆ ಸಲ್ಲಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.

Leave a Reply

Your email address will not be published. Required fields are marked *