ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ… ಎಲ್ಲಿ ಮತ್ತು ಹೇಗೆ ಆಚರಿಸಬೇಕು?

ಬೆಂಗಳೂರು: ಸಾರ್ವಜನಿಕ ಗಣೇಶೊತ್ಸವ ಆಚರಣೆ ಕುರಿತು ರಾಜ್ಯ ಸರ್ಕಾರ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಅದರಂತೆ ಹೆಚ್ಚು ಜನರು ಸೇರದೆ ಗಲ್ಲಿ-ಗಲ್ಲಿಗಳಲ್ಲಿ ಆಚರಿಸಲು ಅವಕಾಶ ನೀಡಲಾಗಿದೆ. ವಾರ್ಡ್, ಏರಿಯಾ, ಗ್ರಾಮಗಳಲ್ಲಿ ಗಣೇಶನನ್ನು ಸ್ಥಾಪಿಸಿ ಉತ್ಸವ ಆಚರಿಸಲು ರಾಜ್ಯ ಸಕಾರ ಅನುಮತಿ ನೀಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗಣೇಶೋತ್ಸವ ಆಚರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊoಡಿದ್ದಾರೆ. ತಮ್ಮ ಮನೆಗಳಲ್ಲಿ, ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊoದಿಗೆ ಗಣೇಶ ಮೂರ್ತಿ ಸ್ಥಾಪಿಸಿ, ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿ, ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.

ಗಣೇಶೋತ್ಸವ ಆಚರಣೆ ಪರಿಷ್ಕೃತ ಮಾರ್ಗಸೂಚಿಗಳು:

  1. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊoದಿಗೆ ಆಚರಿಸಬಹುದು.
  2. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.
  3. ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ, ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.
  4. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.
  5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
  6. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸತಕ್ಕದ್ದಲ್ಲ, ಮಾಡತಕ್ಕದ್ದಲ್ಲ.
  7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ ಖಾಸಗಿ ಬಯಲು ಪ್ರದೇಶಗಳಲ್ಲಿ ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು.

Leave a Reply

Your email address will not be published. Required fields are marked *