ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೋಹನ್ ದಾಸ್ ಇನ್ನಿಲ್ಲ

ಉಡುಪಿ: ಕಳೆದ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಬಿಜೂರು ಗೋವಿಂದಪ್ಪ ಮೋಹನ್ ದಾಸ್(70) ಅವರು ಇಂದು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಒಂದು ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಯಶೋದಾ, ಪುತ್ರ ಅಖಿಲ್ ಹಾಗೂ ಪುತ್ರಿ ಯಶಸ್ವಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. 80ರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ವಲಸೆ ಹೋದ ಇವರು, ಅಲ್ಲಿ ಫಾರ್ಮಸಿಯ ವಿವಿಧ ಸಂಸ್ಥೆಗಳಲ್ಲಿ ಕಳೆದ 35 ವರ್ಷಗಳ ಕಾಲ ದುಡಿದಿದ್ದರು. ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಹಾಗೂ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *