ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಾಂಗ್ರೆಸ್ ಮುಖಂಡ ಸೆರೆ

ಬೆಂಗಳೂರು: ಕೊರೊನಾ ಸೋಂಕಿತರಾಗಿರುವ ಗೃಹಸಚಿವ ಅಮಿತ್ ಶಾ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆನಂದ್ ಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಈತ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಟ್ವೀಟ್ ಮಾಡಿದ್ದರು. ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆನಂದ್ ಪ್ರಸಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿಯಾಗಿದ್ದಾನೆ. ಕೆ.ಆರ್. ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೂಡಾ ಆಗಿದ್ದಾನೆ ಎಂದು ತಿಳಿದುಬಂದಿದೆ. ಅಮಿತ್ ಶಾ ಆರೋಗ್ಯ ಸ್ಥಿತಿಯ ಬಗ್ಗೆ ಕೆಲವರು ಟ್ವೀಟ್‍ಗಳನ್ನು ಮಾಡಿದ್ದಾರೆ. ಈ ಟ್ವೀಟ್‍ಗಳಿಗೆ ಆನಂದ್ ಪ್ರಸಾದ್ ಅವಹೇಳನಕಾರಿ ಕಮೆಂಟ್ ಹಾಕಿದ್ದ ಎನ್ನಲಾಗಿದೆ.

Leave a Reply

Your email address will not be published. Required fields are marked *