ಸಂಪ್ಯ: ಕಮರಿಗೆ ಕಾರ್ ಪಲ್ಟಿ, ಚಾಲಕ ಪಾರು

ಮಂಗಳೂರು: ಪುತ್ತೂರು ಹೊರವಲಯದ ಸಂಪ್ಯ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರ್ ಕಮರಿಗೆ ಪಲ್ಟಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾರ್ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುಳ್ಯ ಕಡೆಯಿಂದ ಬರುತ್ತಿದ್ದ ಕಾರ್ ಚಾಲಕ ತಿರುವಿನಲ್ಲಿ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರ್ ನಜ್ಜುಗುಜ್ಜಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
