ಸಂಸತ್ ಭವನದ ಎದುರು ಶಂಕಾಸ್ಪದ ತಿರುಗಾಟ: ಕಾಶ್ಮೀರದ ಯುವಕ ಅರೆಸ್ಟ್!

ನವದೆಹಲಿ: ಸಂಸತ್ ಭವನದ ಎದುರು ಶಂಕಾಸ್ಪದವಾಗಿ ತಿರುಗಾಡುತ್ತಿದ್ದ ಕಾಶ್ಮೀರ ಮೂಲದ ಯುವಕನನ್ನು ಸಿಆರ್‍ಪಿಎಫ್ ಯೋಧರು ವಶಕ್ಕೆ ಪಡೆದಿದ್ದಾರೆ. ವಿಜಯ್ ಚೌಕ್ ಬಳಿ ಆತನನ್ನು ಬಂಧಿಸಲಾಗಿದೆ. ಬಂಧಿತನ ಬಳಿ ಎರಡು ಗುರುತಿನ ಚೀಟಿಗಳು ಪತ್ತೆಯಾಗಿವೆ. ಎರಡೂ ಐಡಿಗಳಲ್ಲಿ ಬೇರೆ ಬೇರೆ ಹೆಸರಿದ್ದು ಅನುಮಾನ ವ್ಯಕ್ತವಾಗಿದೆ. ದೆಹಲಿ ಪೊಲೀಸರಿಗೆ ಆರೋಪಿಯನ್ನು ಹಸ್ತಾಂತರಿಸಲಾಗಿದೆ.
ಬಂಧಿತ ವ್ಯಕ್ತಿ ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯವನಾಗಿದ್ದು ಶಂಕಾಸ್ಪದ ನಡವಳಿಕೆ ಹಿನ್ನೆಲೆಯಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆ ವೇಳೆ ಪೊಲೀಸರಿಗೆ ಈ ವ್ಯಕ್ತಿ ತನ್ನ ಬಗ್ಗೆ ದಾರಿ ತಪ್ಪಿಸುವ ಮಾಹಿತಿ ನೀಡಿದ್ದಾನೆ. ಕೋಡ್ ವರ್ಡ್ ಹೊಂದಿದ್ದ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ.

Leave a Reply

Your email address will not be published. Required fields are marked *