ಸಾರ್ವಜನಿಕ ಗಣೇಶೋತ್ಸವ ಆಚರಿಸಿದರೆ ಕಠಿಣ ಕ್ರಮ -ಉಡುಪಿ ಡಿಸಿ ವಾರ್ನಿಂಗ್

ಉಡುಪಿ: `ಗಣೇಶೋತ್ಸವ ಆಚರಣೆಯನ್ನು ಈ ಬಾರಿ ಕೊರೊನಾದಿಂದಾಗಿ ಸರಳವಾಗಿ ಆಚರಿಸುವಂತೆ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲಾದರೂ ಸಾರ್ವಜನಿಕವಾಗಿ ಆಚರಿಸುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಉಡುಪಿ ಡಿಸಿ ಜಿ. ಜಗದೀಶ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಗಣೇಶನ ಮೂರ್ತಿಯನ್ನು ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿಗಳಲ್ಲಿ ವಿಸರ್ಜನೆ ಮಾಡುವಂತಿಲ್ಲ. ಉಡುಪಿ ಜಿಲ್ಲಾಡಳಿತ, ಸ್ಥಳೀಯ ಗ್ರಾಮ ಪಂಚಾಯತ್ ಯಾವುದೇ ವ್ಯವಸ್ಥೆ ಮಾಡಿರುವುದಿಲ್ಲ. ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದವರು ಹತ್ತಿರದ ಬಾವಿ ಅಥವಾ ಕೆರೆಗಳಲ್ಲಿ ವಿಸರ್ಜನೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕವಾಗಿ ಸಂಘಟನೆಗಳು ಗಣೇಶೋತ್ಸವ ಆಚರಣೆ, ಉತ್ಸವ, ಮೆರವಣಿಗೆ ಮಾಡಿದಲ್ಲಿ ಜನರನ್ನು ಒಟ್ಟುಸೇರಿಸಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿಸಿ ಹೇಳಿದ್ದಾರೆ.

Leave a Reply

Your email address will not be published. Required fields are marked *