ಸಿಎಂ ಯಡಿಯೂರಪ್ಪಗೂ ಕೊರೋನಾ ಪಾಸಿಟಿವ್!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ಸ್ವತಃ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮೂಲಕ ತಾವು ಕೊರೋನಾ ಪಾಸಿಟಿವ್ ಆಗಿರುವುದನ್ನು ತಿಳಿಸಿದ್ದಾರೆ.
ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ನನಗೆ ಯಾವುದೇ ರೋಗಲಕ್ಷಣಗಳು ಇಲ್ಲ. ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್‌ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.
ಕೇಂದ್ರದ ಮಾರ್ಗಸೂಚಿಯಂತೆ ಪ್ರತಿ ಮೂರು ದಿನಗಳಿಗೊಮ್ಮೆ ಪ್ರಮುಖ ಹುದ್ದೆಗಳಲ್ಲಿ ಇರುವವರು ಕೋವಿಡ್ ಪರೀಕ್ಷೆಗೆ ಒಳಗಾಗುತ್ತಾರೆ.

Leave a Reply

Your email address will not be published. Required fields are marked *