ಸಿದ್ದರಾಮಯ್ಯಗೆ ಕೊರೋನಾ ದೃಢ!ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಇದಾಗಿದ್ದು, ಆತಂಕಪಡುವ ಅವಶ್ಯಕತೆಯಿಲ್ಲ ಎಂದ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ರಾತ್ರಿ ಆಸ್ಪತ್ರೆಯಲ್ಲೇ ಸಿದ್ದರಾಮಯ್ಯ ಉಳಿದುಕೊಂಡಿದ್ದಾರೆ. ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಈಗ ನೋಡಿಕೊಳ್ಳುತ್ತಿದ್ದಾರೆ. ಕೊರೋನಾ ಟೆಸ್ಟ್ ಬಳಿಕ ಸಿದ್ದರಾಮಯ್ಯ ಅವರಿಗೂ ಪಾಸಿಟಿವ್ ಬಂದಿರುವುದನ್ನು ಮಗ ಯತೀಂದ್ರ ಟ್ವೀಟ್ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗುವ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು.

Leave a Reply

Your email address will not be published. Required fields are marked *