ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಪೊಲೀಸರಿಗೆ ಕೋವಿಡ್ ಪರೀಕ್ಷೆ!

ಬೆಂಗಳೂರು: ನಾಳೆ ನಗರದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಪರೇಡ್‍ನಲ್ಲಿ ಪಾಲ್ಗೊಳ್ಳುವ ಎಲ್ಲಾ ಪೊಲೀಸರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ನೆಗೆಟಿವ್ ವರದಿ ಬಂದವರಿಗೆ ಮಾತ್ರ ಪರೇಡ್‍ನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ. ನಾಳೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಯಲಿದೆ. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿಲ್ಲ. ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ 350 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ನೆಗೆಟಿವ್ ವರದಿ ಬಂದವರನ್ನು ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ. ಪೊಲೀಸರಿಗೆ ಪಥ ಸಂಚಲನ ಹೊರತುಪಡಿಸಿ ಬೇರೆ ಕಾರ್ಯಕ್ರಮಗಳು ಇರುವುದಿಲ್ಲ. ಭದ್ರತಾ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಪೊಲೀಸ್ ಸಿಬ್ಭಂದಿಗೆ ಸಹ ಕೋವಿಡ್ ಪರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *