ಹಿರಿಯಡ್ಕ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ!

ಹೆಬ್ರಿ: ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರದೀಪ್ ಶೆಟ್ಟಿ ಎಂಬಾತನನ್ನು ಆರೋಪಿ ಎಂದು ಹೆಸರಿಸಲಾಗಿದೆ.
ಘಟನೆಯ ವಿವರ:
ನಿನ್ನೆ ಮಧ್ಯಾಹ್ನದ ವೇಳೆ 13 ವರ್ಷ ಪ್ರಾಯದ ಬಾಲಕಿ ಮನೆಯಲ್ಲಿದ್ದ ವೇಳೆ ಅಲ್ಲೇ ಸಮೀಪ ರಸ್ತೆ ಕಾಮಗಾರಿ ನಡೆಸುತ್ತಿದ್ದ ಆರೋಪಿ ಪ್ರದೀಪ್ ಶೆಟ್ಟಿ ಮನೆಗೆ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಸಮತಾ ಸೈನಿಕ ದಳ ಗ್ರಾಮ ಶಾಖೆ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಕುರಿತು ಹಿರಿಯಡ್ಕ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *