ಹೆಗ್ಗಡೆ, ಪೇಜಾವರಶ್ರೀ, ಶೃಂಗೇರಿ ಶ್ರೀ ಸಹಿತ ರಾಜ್ಯದ ಐವರಿಗೆ ರಾಮಮಂದಿರ ಶಿಲಾನ್ಯಾಸಕ್ಕೆ ಆಹ್ವಾನ

ಉಡುಪಿ: ಆಗಸ್ಟ್ 5ರಂದು ನಡೆಯಲಿರುವ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಜ್ಯದ ಐವರಿಗೆ ಮಾತ್ರ ಆಹ್ವಾನ ಕಳುಹಿಸಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಪೇಜಾವರ ಯತಿ, ಶೃಂಗೇರಿ ಮಠಾಧಿಪತಿ ಸೇರಿದಂತೆ ಐದು ಮಂದಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ.
ದೇಶದಲ್ಲಿ ಕೊರೊನಾ ಮಹಾಮಾರಿ ವೇಗವಾಗಿ ಹಬ್ಬುತ್ತಿರುವ ಕಾರಣ 200 ಮಂದಿಗೆ ಮಾತ್ರ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಮ ಮಂದಿರ ನಿರ್ಮಾಣ ಟ್ರಸ್ಟಿಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆ, ಶೃಂಗೇರಿ ಮಠ, ಆದಿಚುಂಚನಗಿರಿ ಮಠ ಹಾಗೂ ಸುತ್ತೂರು ಮಠಾಧೀಶರನ್ನು ಆಹ್ವಾನಿಸಲಾಗಿದೆ.