ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳು ಭಾರೀ ಮಳೆ ನಿರೀಕ್ಷೆ!

ಹೊಸದಿಲ್ಲಿ: ಕರ್ನಾಟಕ ರಾಜ್ಯ ಸೇರಿದಂತೆ ದಕ್ಷಿಣ ರಾಜ್ಯಗಳು, ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ರಾಯಲಸೀಮೆ, ಕರ್ನಾಟಕದ ಕರಾವಳಿ ಮತ್ತು ಒಳನಾಡು ಪ್ರದೇಶ, ತಮಿಳುನಾಡು, ಪುದುಚೇರಿ, ಕಾರಿಕಲ್, ಕೇರಳ ಮತ್ತು ಮಾಹೆಯಲ್ಲಿ ಮಂಗಳವಾರ ವ್ಯಾಪಕ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ನಾಳೆ ಒಡಿಶಾ, ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತಿತರ ಕಡೆ ವ್ಯಾಪಕ ಮಳೆ ಬೀಳಲಿದೆ ಎಂದು ಇಲಾಖೆ ಮೂಲಗಳು ಹೇಳಿವೆ.