ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಧ್ಯೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಮಳೆಗಾಲದ ಪ್ರಾರಂಭದಲ್ಲೇ ಗುಡ್ಡಕುಸಿತ ಉಂಟಾಗಿ ಭಾರೀ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಈಗ ಮಳೆಯ ತೀವ್ರತೆ ಕಡಿಮೆಯಾಗಿದ್ದು ಇಂದಿನಿಂದ ದಿನದ 24 ಗಂಟೆಯೂ ಲಘು ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.
ಮಳೆ ಮತ್ತು ಗುಡ್ಡ ಕುಸಿತದಿಂದ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಇಂದಿನಿಂದ ರಾತ್ರಿ ಸಂಚಾರಕ್ಕೂ ಅವಕಾಶವನ್ನು ಚಿಕ್ಕಮಗಳೂರು ಜಿಲ್ಲಾಡಳಿತ ನೀಡಿದೆ. ಲಘು ವಾಹನಗಳ ಜೊತೆ ಕೆ.ಎಸ್.ಆರ್.ಟಿ.ಸಿ ಹಾಗೂ ಮಿನಿ ಬಸ್ ಗಳಿಗೂ ಅವಕಾಶ ನೀಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ, ಧಾರ್ಮಿಕ ಸ್ಥಳಗಳಲ್ಲಿ, ಹೋಟೆಲ್, ರೆಸಾರ್ಟ್, ಹೋಂ ಸ್ಟೇಗಳಲ್ಲಿ ಕೊರೊನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದ್ದು ಬಸ್ ಹೊರತುಪಡಿಸಿ ಸಣ್ಣ ವಾಹನಗಳಲ್ಲಿ ಬರುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

Leave a Reply

Your email address will not be published. Required fields are marked *