ಫ್ಲೆಕ್ಸ್, ಕಟೌಟ್ ತೆರವಿಗೆ ಮೇಯರ್ ದಿವಾಕರ್ ಪಾಂಡೇಶ್ವರ್ ಸೂಚನೆ

ಮಂಗಳೂರು: ಸಾವ೯ಜನಿಕರಿಂದ ಅನೇಕ ದೂರುಗಳು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಶಾಸಕರಾದ  ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರ ಸಹಕಾರದೊಂದಿಗೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಖಾಸಗಿ ಮತ್ತು ಸಾವ೯ಜನಿಕ ಸಂಬಂಧಿತ ಅನಧಿಕೃತ ಕಟೌಟ್ ಅಥವ ಫ್ಲೆಕ್ಸ್ ಗಳನ್ನು ಮುಂದಿನ ಮೂರು ದಿನಗಳೊಳಗಾಗಿ ತೆರವುಗೊಳಿಸುವಂತೆ ಸಾವ೯ಜನಿಕರಲ್ಲಿ ವಿನಂತಿಸಲಾಗಿದೆ. ತಪ್ಪಿದಲ್ಲಿ ಮಹಾನಗರಪಾಲಿಕೆಯಿಂದಲೇ ಫ್ಲೆಕ್ಸ್ ತೆರವು ಕಾಯಾ೯ಚರಣೆ ನಡೆಸಲಾಗುವುದು ಹಾಗೂ ಪಾಲಿಕೆಯಿಂದ ವಷಪಡಿಸಲಾದ ಪ್ಲೆಕ್ಸ್(Flex)  ಮತ್ತು ಫ್ರೇಮ್ (Frame) ಗಳನ್ನು ಹಿಂದಿರುಗಿಸಲಾಗುವುದಿಲ್ಲ .ಮುಂದಿನ ದಿನಗಳಲ್ಲಿ ಯಾವುದೇ ಬ್ಯಾನರ್ ಅಳವಡಿಕೆಗೆ ಮಂಗಳೂರು ಮಹಾನಗರ ಪಾಲಿಕೆಯ ಅನುಮತಿ ಕಡ್ಡಾಯವಾಗಿದೆ.ಈ ಸೂಚನೆಯನ್ನು ತಪ್ಪಿದಲ್ಲಿ ಮಹಾನಗರಪಾಲಿಕೆಯಿಂದಲೇ ಫ್ಲೆಕ್ಸ್ ತೆರವು ಕಾಯಾ೯ಚರಣೆ ನಡೆಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮೇಯರ್ ದಿವಾಕರ್ ಪಾಂಡೇಶ್ವರ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *