ಬೆಂಗಳೂರು ಗಲಭೆ: ಎಸ್ ಡಿಪಿಐ ಕಚೇರಿಗಳ ಮೇಲೆ ಸಿಸಿಬಿ ದಾಳಿ!

ಬೆಂಗಳೂರು: ಇತ್ತೀಚೆಗೆ ನಗರದ ಡಿ.ಜೆ. ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಎಸ್ ಡಿಪಿಐ ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದ್ದು ಗಲಭೆಯಲ್ಲಿ ಪಾಲ್ಗೊಂಡ ಆರೋಪಿಗಳು ನೀಡಿದ ಮಾಹಿತಿ ಆಧಾರದಲ್ಲಿ ಪರಿಶೀಲನೆ ನಡೆಸಿದ್ದೇವೆ ಎಂದರು.
ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಡಿಜೆ ಹಳ್ಳಿ, ಕೆ.ಜಿ.ಹಳ್ಳಿ, ಹಲಸೂರು ಗೇಟ್ನಲ್ಲಿರುವ ಎಸ್ಡಿಪಿಐ ಪಕ್ಷದ ಕಚೇರಿಗಳಲ್ಲಿ ಶೋಧ ಕಾರ್ಯ ನಡಸಲಾಗಿದೆ. ಎಸ್ ಡಿಪಿಐ ಕಾರ್ಯಕರ್ತ, ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಮುಜಾಮಿಲ್ ಪಾಷಾ ಎಂಬವನನ್ನು ಈಗಾಗಲೇ ಸಿಸಿಬಿ ಬಂಧಿಸಿ ವಿಚಾರಣೆ ಮುಂದುವರಿಸಿದೆ.