ಮಂಗಳೂರಿನ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿ ವಿಲೀನ ಇಲ್ಲ: ನಳಿನ್

ಮಂಗಳೂರು: ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯನ್ನು ಮಂಗಳೂರಿನಲ್ಲಿಯೇ ಮುಂದುವರೆಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಒಪ್ಪಿಗೆ ನೀಡಿದ್ದಾಗಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ಕಳೆದ ಎರಡು ದಶಕಗಳಿಗಿಂತ ಹೆಚ್ಚು ಸಮಯದಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆದಾಯ ತೆರಿಗೆ ಪ್ರಧಾನ ಆಯುಕ್ತರ (ಆಡಳಿತ) ಕಚೇರಿಯನ್ನು ಗೋವಾದ ಪಣಜಿಯ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯಲ್ಲಿ ವಿಲೀನಗೊಳಿಸುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರಲ್ಲಿ ನಳಿನ್ ವೈಯಕ್ತಿಕವಾಗಿ ಮನವಿ ಮಾಡಿದ್ದರು.
ನಳಿನ್ ಅವರ ಮನವಿಯನ್ನು ನಿರ್ಮಲಾ ಸೀತಾರಾಮನ್ ಪುರಸ್ಕರಿದ್ದು, ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿ ವಿಲೀನ ಪ್ರಕ್ರಿಯೆ ಕೈ ಬಿಡುವ ಭರವಸೆ ನೀಡಿದ್ದಾರೆ. ಇದಕ್ಕೆ ಸಹಕರಿಸಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೂ ನಳಿನ್ ಧನ್ಯವಾದ ತಿಳಿಸಿದ್ದಾರೆ.