ರಾಗಿಣಿ ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ!

ಬೆಂಗಳೂರು: ಡ್ರಗ್ಸ್ ದಂಧೆಯ ನಂಟು ಹೊಂದಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದು ಆಕೆಯ ಜಾಮೀನು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಹೊಂದಿರುವ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ರಾಗಿಣಿ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ರಾಗಿಣಿ ವಿಚಾರಣೆಗೆ ಸರಿಯಾಗಿ ಸ್ಪಂದಿಸದ ಕಾರಣ ಮತ್ತೆ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಕೊಡುವಂತೆ ಕೋರ್ಟ್ ಗೆ ಸಿಸಿಬಿ ಅರ್ಜಿ ಸಲ್ಲಿಸಿತ್ತು. 1ನೇ ಎಸಿಎಂಎಂ ನ್ಯಾಯಾಲಯದ ನಾಯ್ಯಾಧೀಶರಾದ ಜಗದೀಶ್ ಅವರು ಈ ಆದೇಶ ನೀಡಿದ್ದಾರೆ.