ಬಂಟ್ವಾಳ: ರೌಡಿಶೀಟರ್ ಫಾರೂಕ್ ಬರ್ಬರ ಹತ್ಯೆ!! ಮುಂದುವರಿದ ರೌಡಿಗಳ ಅಟ್ಟಹಾಸ!!
ಮಂಗಳೂರು: ನಟೋರಿಯಸ್ ರೌಡಿಶೀಟರ್ ಫಾರೂಕ್ ಯಾನೆ ಚೆನ್ನ(35) ಎಂಬವನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆಗೈದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೆಲ್ಕಾರ್ ಬಳಿ ಇಂದು ಸಂಜೆ ನಡೆದಿದೆ.
ಫಾರೂಕ್ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು ರೌಡಿಶೀಟರ್ ಆಗಿದ್ದ. ಈತನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿರುವ ತಂಡ ಕಡಿದು ಕೊಲೆಗೈದು ಪರಾರಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ರೌಡಿಗಳ ಅಟ್ಟಹಾಸ ಮುಂದುವರಿದಿದ್ದು ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ.