ಕುತ್ತಾರು ಕೃಷ್ಣಕೋಡಿ ಬಳಿ ಯುವಕರಿಬ್ಬರಿಗೆ ಚೂರಿ ಇರಿತ

ಉಳ್ಳಾಲ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಇನ್ನೊಂದು ಬೈಕಿನಲ್ಲಿ ಬಂದ ತಂಡವೊಂದು ಅಪಘಾತ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಸೇವಂತಿಗುಡ್ಡೆ ನಿವಾಸಿ ಆದಿತ್ಯ (27) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್(23) ಇರಿತಕ್ಕೊಳಗಾದವರು. ಚರ್ಚೊಂದರಲ್ಲಿ ಕ್ಯಾಟರಿಂಗ್ ನಲ್ಲಿ ಕೆಲಸಕ್ಕಿದ್ದ ಸಹೋದರನನ್ನು ಕರೆ ತರಲು ತೆರಳುವಾಗ ಘಟನೆ ನಡೆದಿದೆ. ಹಿಂಬದಿಯಿಂದ ಬಂದ ಅಪರಿಚಿತ ಬೈಕ್ , ಇವರಿದ್ದ ಬೈಕ್ ಗೆ ಗುದ್ದಿದೆ. ಈ ವೇಳೆ ಇಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಆ ಬಳಿಕ ಇಬ್ಬರಿಗೂ ಚೂರಿಯಿಂದ ಇರಿದ ಆಗಂತುಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಓರ್ವನಿಗೆ ಎರಡು ಕಡೆಯಲ್ಲಿ ಗಾಯಗಳಾದರೆ, ಇನ್ನೋರ್ವನಿಗೆ ಒಂದು ಗಾಯವಾಗಿದೆ. ಇಬ್ಬರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದೇ ಸ್ಥಳದಲ್ಲಿ ಈ ಹಿಂದೆಯೂ ಆರ್ ಎಸ್ ಎಸ್ ಮುಖಂಡನ ಹತ್ಯೆ ಯತ್ನ ನಡೆದಿತ್ತು.

1 thought on “ಕುತ್ತಾರು ಕೃಷ್ಣಕೋಡಿ ಬಳಿ ಯುವಕರಿಬ್ಬರಿಗೆ ಚೂರಿ ಇರಿತ

  1. ನಮೂದಿಸಿರುವ ಹೆಸರು ಸರಿ ಆಗಿದ್ದು, ವಯಸ್ಸು ತಪ್ಪಾಗಿದೆ. ಪವನ್ ವಯಸ್ಸು 23 ಹಾಗೂ ಆದಿತ್ಯ ವಯಸ್ಸು 27.

Leave a Reply

Your email address will not be published. Required fields are marked *