ಹಳೆಯಂಗಡಿ ಸಿಡಿಲಿನ ಅಘಾತ :ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒರ್ವ ಬಾಲಕ ಸಾವು

ಮೂಲ್ಕಿ : ಬೊಳ್ಳೂರಿನ ಇಂದಿರಾನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಸಿಡಿಲಿನ ಅಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ಒರ್ವ ಬಾಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಇಂದಿರಾನಗರದ ಬೊಳ್ಳೂರು ಮಸೀದಿ ಹಿಂಭಾಗದ ಮನೆಯ ಖಾಸಗಿ ಜಮೀನಿನಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಎರಡನೇ ಪುತ್ರ ನಿಹಾನ್ (೫) ಸಾವನ್ನಪ್ಪಿದ್ದು, ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತೇಶ್ (೬) ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಮನೆಯ ಹತ್ತಿರ ಆಟವಾಡುತ್ತಿದ್ದಾಗ ಸಿಡಿಲಿನ ಅಘಾತ ಬಡಿದ ಪರಿಣಾಮ ಮಕ್ಕಳು ಸ್ಥಳದಲ್ಲಿಯೇ ಮೂರ್ಚೆ ಹೋಗಿದ್ದರು. ನಂತರ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *