ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಮಂಗಳೂರು: ಪತ್ರಿಕೋದ್ಯಮದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಇವರು ಜಯಕಿರಣದಲ್ಲಿ ಕಳೆದ 16 ವರ್ಷಗಳಿಂದ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.2018 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, 2008 ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ಮು ಪಡೆದುಕೊಂಡಿದ್ದು ಇದೀಗ ಜಗನ್ನಾಥ ಶೆಟ್ಟಿ ಬಾಳ ಇವರು ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಗೊಂಡಿದ್ದು . ಇವರಿಗೆ ಮಂಗಳೂರು ಕಾರ್ಯನಿರತ ಪತ್ರಕರ್ತರ ಸಂಘ ,ಮಂಗಳೂರು ಪ್ರೆಸ್ಸ್ ಕ್ಲಬ್ ಹಾಗು ಜಯಕಿರಣ ಪತ್ರಿಕೆ ಸಂಸ್ಥೆ ಅಭಿನಂದಿಸಿದೆ.