ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ನವಿಲು ಸಾವು

ಸೋಮೇಶ್ವರ: ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲೆಯ ಹಿಂಭಾಗದಲ್ಲಿ ಇಂದು ಬೆಳಗ್ಗೆ ಸತ್ತಿರುವ ಸ್ಥಿತಿಯಲ್ಲಿ ಕಂಡು ಬಂದ ರಾಷ್ಟ್ರ ಪಕ್ಷಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ ರವರು ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಅರಣ್ಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.