ಅತ್ಯಾಚಾರ ಪ್ರಕರಣ |ಕಡಬ ಠಾಣೆಗೆ ಐಜಿಪಿ ದೇವಜ್ಯೋತಿ ರೇ ಬೇಟಿ

ಕಡಬ: ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್ಟೇಬಲ್ ಶಿವರಾಜ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ.

ಸಂತ್ರಸ್ತ ಯುವತಿಯ ತಂದೆಯು ಆರೋಪಿ ಶಿವರಾಜ್ ವಿರುದ್ಧ ಸೋಮವಾರದಂದು ದೂರು ನೀಡಿದ್ದು, ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ. ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ ಪೋಲಿಸ್ ಸಿಬ್ಬಂದಿ ಶಿವರಾಜ್ ನೀಡಿದ್ದಾನೆ ಎಂದು ಯುವತಿಯ ತಂದೆ ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಗೆ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಹಾಗೂ ಡಿವೈಎಸ್ಪಿ ಗಾನ ಪಿ.ಕುಮಾರ್ ಸೋಮವಾರದಂದು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರು. ಇಂದು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *