ಶಾಲಾ ವಿದ್ಯಾರ್ಥಿಗಳ ಮೇಲೆ ನಾಯಿ ದಾಳಿ: ಆಸ್ಪತ್ರೆ ಸೇರಿದ ಪುಟಾಣಿಗಳು.

ಸೋಮವಾರಪೇಟೆ:- ಶಾಲಾ ವಿದ್ಯಾರ್ಥಿಗಳ ಮೇಲೆ ನಾಯಿಯೊಂದು ದಾಳಿ ನಡೆಸಿದ ಪರಿಣಾಮ ಪುಟಾಣಿಗಳಿಬ್ಬರು ಆಸ್ಪತ್ರೆ ಸೇರಿದ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಆವರಣದಲ್ಲಿ ಪ್ರಾರ್ಥನೆಗೆ ಸಜ್ಜಾಗುತ್ತಿದ್ದ ವೇಳೆ ನಾಯಿಯೊಂದು ಏಕಾ ಏಕಿ ಮಕ್ಕಳ ಮೇಲೆ ದಾಳಿ ನಡೆಸಿ ಸಿಕ್ಕಿದವರನ್ನು ಕಚ್ಚ ಲಾರಂಭಿಸಿತು ಈ ಅನಿರೀಕ್ಷಿತ ಘಟನೆಯಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಸಿಕ್ಕ ಕಡೆ ಒಡಲಾರಂಭಿಸಿದರು ಆದರೂ ಮೂರನೇ ತರಗತಿಯ ಕಿಶನ್ ಹಾಗೂ ಒಂದನೇ ತರಗತಿಯ ಧ್ವನಿ ಎಂಬ ವಿದ್ಯಾರ್ಥಿಗಳ ಕಾಲು ಹಾಗೂ ತೊಡೆಯ ಭಾಗಕ್ಕೆ ಕಚ್ಚಿದೆ.
ನಾಯಿ ದಾಳಿಗೆ ಮಕ್ಕಳನ್ನು ರಕ್ಷಿಸಲು ಶಿಕ್ಷಕಿಯರು ಹರಸಾಹಸ ಪಡಬೇಕಾಯಿತು. ಗಾಯಗೊಂಡ ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು.ಈ ಬಗ್ಗೆ ಶಾಲಾ ಮುಕ್ಯೋಪಾಧ್ಯಾಯಿನಿ ಮಿಲ್ಡ್ರೆಡ್ ಗೊನ್ಸಾಲ್ವೆಸ್ ಪೊಲೀಸ್ ಹಾಗೂ ಪಟ್ಟಣ ಪಂಚಾಯ್ತಿಗೆ ದೂರು ನೀಡಿದ್ದಾರೆ.


ಇದೆ ನಾಯಿ ಇಂದು ಬೆಳಿಗ್ಗೆ ಕಕ್ಕೆಹೊಳೆ ಸಮೀಪ ಇಬ್ಬರಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪ ಇಬ್ವರಿಗೆ ಸೇರಿದಂತೆ ಒಟ್ಟು ಆರು ಮಂದಿಗೆ ಕಚ್ಚಿದ್ದು. ನಾಲ್ಕೈದು ನಾಯಿಗಳಿಗೂ ಕಚ್ಚಿದೆ ಎನ್ನಲಾಗಿದೆ.


ಪಟ್ಟಣ ಪಂಚಾಯ್ತಿ ಅಧ್ಯಕ್ಷ ಚಂದ್ರು,ಸದಸ್ಯರಾದ ಶೀಲಾ ಡಿಸೋಜ, ಮಹೇಶ್ ಹಾಗೂ ಎಸ್.ಮಹೇಶ್ ಮುಖ್ಯಾಧಿಕಾರಿ ನಾಚಪ್ಪ ಆಸ್ಪತ್ರೆಗೆ ತೆರಳಿ ಮಕ್ಕಳ ಯೋಗಕ್ಷೇಮ ವಿಚಾರಿಸಿದರು.
ಪಟ್ಟಣದಲ್ಲಿ ನಾಯಿಗಳ ಹಾವಳಿ ಮಿತಿಮೀರಿದ್ದು ಪಟ್ಟಣ ಪಂಚಾಯಿತಿಯ ನಿರ್ಲಕ್ಷ್ಯದಿಂದ ಇಂತಹ ಘಟನೆ ಸಂಭವಿಸುತ್ತಿದೆ ಎಂದು ನಾಗರೀಕರು ಅಸಮಾಧಾನ ವ್ಯಕ್ತಪಡಿಸಿದ್ದು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *