ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಿಗ್ಗೆ ಐದು ಗಂಟೆಯವರೆಗೆ ಮದ್ಯ ನಿಷೇಧ

ಮಂಗಳೂರು : ರೂಪಾಂತರಿ ವೈರಸ್ ಒಮಿಕ್ರಾನ್ ಹರಡುವಿಕೆಯ ನಿಯಂತ್ರಿಸುವ ನಿಟ್ಟಿನಲ್ಲಿ ವಾರಾಂತ್ಯ ಕರ್ಫ್ಯೂ ಆಜ್ಞೆಯಂತೆ ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಿಗ್ಗೆ ಐದು ಗಂಟೆಯವರೆಗೆ ಮದ್ಯ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸನ್ನದು ಮದ್ಯದ ಅಂಗಡಿಗಳಲ್ಲಿ ಸಾಮಾಜಿಕ ಅಂತರ, ಗ್ಲೌಸ್, ಮಾಸ್ಕ್ ಇತ್ಯಾದಿ ನಿಯಮಗಳನ್ನು ಕಾಪಾಡಿಕೊಳ್ಳಬೇಕು. ನಿಯಮ ಉಲ್ಲಂಘನೆಯಾದಲ್ಲಿ ಅಥವಾ ದುರುಪಯೋಗವಾದಲ್ಲಿ ಸನ್ನದು ಅಮಾನತು ಮತ್ತಿತರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಬಕಾರಿ ಆಯುಕ್ತರು ಎಚ್ಚರಿಸಿದ್ದಾರೆ.