ಗುರುಪುರ ಸಹಕಾರಿ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ!

ಕುಪ್ಪೆಪದವು: ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ನಾಗರಾಜ್ ರಾವ್ (58) ಆತ್ಮಹತ್ಯೆಗೆ ಶರಣಾಗಿದ್ದಾರೆ.ವಾಮಂಜೂರು ತಿರುವೈಲು ತಾರಿಗುಡ್ಡೆ ನಿವಾಸಿಯಾಗಿರುವ ರಾವ್ ಅವರು ಬ್ಯಾಂಕ್ ಗೆ ಸಂಭಂದಪಟ್ಟ ವಿಚಾರದಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.ಗುರುವಾರ ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಕಂಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ರಾವ್ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಜಯಕಿರಣ ಪತ್ರಿಕೆ ಓದಿರಿ.
ಸುದ್ದಿಗಳನ್ನು ಕ್ಷಣದಲ್ಲೇ ತಿಳಿಯುವ ಕುತೂಹಲ