ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸೇಕ್ರೆಡ್ ಹಾರ್ಟ್ ಚರ್ಚ್ ಎರ್ಮಾಳ್ ವತಿಯಿಂದ ಹೊರೆಕಾಣಿಕೆ ಸಮರ್ಪಣೆ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪುನರ್ ಪ್ರತಿಷ್ಠೆ, ರಥೋತ್ಸವ, ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮದ ಅನ್ನಸಂತರ್ಪಣೆಗೆ ಎರ್ಮಾಳು ಸೇಕ್ರೆಡ್ ಹಾರ್ಟ್ ಚರ್ಚ್ ವತಿಯಿಂದ ಹೊರೆಕಾಣಿಕೆಯು ಸಮರ್ಪಣೆಗೊಂಡಿತು. ಈ ಸಂದರ್ಭದಲ್ಲಿ ಜೇಮ್ಸ್ ಡಿಸೋಜ, ವೆಲೇರಿಯನ್ ಡಿಸೋಜ, ಹಿಲರಿ ಡಿಸೋಜ, ವೆರೊನಿಕ ಬರ್ಬೋಜ, ಶಾರ್ಲೆಟ್ ಫುರ್ಟಾಡೋ, ವನಿತಾ ಡಿಸೋಜ, ಗ್ರೆಟ್ಟಾ ಡಿಸೋಜ, ಲೀನ ಡಿಸೋಜ, ರೀನಾ ಡಿಸೋಜ, ಅಲೈಸ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ|| ಜಿ ಶಂಕರ್, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಶ್ರೀ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ವಿನಯ ಕರ್ಕೆರ ಉಪಸ್ಥಿತರಿದ್ದು ಗೌರವಪೂರ್ವಕವಾಗಿ ಸ್ವಾಗತಿಸಿದರು.

Leave a Reply

Your email address will not be published. Required fields are marked *